ಬೆಂಗಳೂರು, ಫೆ 13 (DaijiworldNews/AK):ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನುಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿನಂದಿಸಿ ಗೌರವಿಸಿದರು.
ಬಳಿಕ ಅವರಿಗೆ ಮುಖ್ಯಮಂತ್ರಿ 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದರು. ತಮ್ಮ 43ನೇ ವಯಸ್ಸಿನಲ್ಲಿ ರೋಹನ್ ಈ ಸಾಧನೆ ಮಾಡಿದ್ದು, ಭಾರತದ ಟೆನಿಸ್ನಲ್ಲಿ ಈ ಸಾಧನೆ ಮಾಡಿದ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.
ಈ ವೇಳೆ ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.