ರಾಂಚಿ, ಫೆ 24(DaijiworldNews/AA): ಭಾರತ ಹಾಗೂ ಇಂಗ್ಲೆಂಡ್ ನಡುವೆ ರಾಂಚಿಯಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಜೋ ರೂಟ್ ಭರ್ಜರಿ ಶತಕ ಸಿಡಿಸಿದ್ದಾರೆ. ಶತಕ ಸಿಡಿಸುವ ಮೂಲಕ ಭಾರತ ತಂಡದ ನಾಯಕ ಹಿಟ್ ಮ್ಯಾನ್ ರೋಹಿತ್ ಶರ್ಮಾರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಜೋ ರೂಟ್ ಅವರು 122 ರನ್ ಗಳಿಸುವ ಮೂಲಕ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ರೂಟ್ ಅವರ ಶತಕದ ನೆರವಿನಿಂದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ ನಲ್ಲಿ 353 ರನ್ ಕಲೆಹಾಕಿದೆ.
ಸಕ್ರಿಯ ಸೆಂಚುರಿ ಸರದಾರರ ಪಟ್ಟಿಯಲ್ಲಿ ರೂಟ್ ಅವರು 3ನೇ ಸ್ಥಾನವನ್ನು ಗಳಿಸಿದ್ದಾರೆ. ಪ್ರಸ್ತುತ ಸಕ್ರಿಯ ಕ್ರಿಕೆಟ್ ಆಟಗಾರರಲ್ಲಿ ಅತೀ ಹೆಚ್ಚು ಅಂತಾರಾಷ್ಟ್ರೀಯ ಶತಕವನ್ನು ಬಾರಿಸಿದ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ ಅವರು ಆಡಿರುವ 580 ಇನಿಂಗ್ಸ್ ನಲ್ಲಿ ಒಟ್ಟು 80 ಶತಕಗಳನ್ನು ಬಾರಿಸುವ ಮೂಲಕ ದಾಖಲೆ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಅವರು ಆಡಿರುವ 467 ಇನಿಂಗ್ಸ್ಗಳಲ್ಲಿ ಒಟ್ಟು 49 ಶತಕಗಳನ್ನು ಬಾರಿಸಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
ಇದೀಗ 444 ಇನಿಂಗ್ಸ್ಗಳಲ್ಲಿ ರೂಟ್ ಅವರು ಒಟ್ಟು 47 ಶತಕಗಳನ್ನು ಬಾರಿಸಿ ಮೂರನೇ ಸ್ಥಾನವನ್ನು ಗಳಿಸಿದ್ದಾರೆ. ಇದರೊಂದಿಗೆ ಈ ಹಿಂದೆ ಮೂರನೇ ಸ್ಥಾನ ಅಲಂಕರಿಸಿದ್ದ ಹಿಟ್ ಮ್ಯಾನ್ ರೋಹಿತ್ ಶರ್ಮಾರನ್ನು ಹಿಂದಿಕ್ಕಿ ರೂಟ್ ಅವರು ಮೂರನೇ ಸ್ಥಾನಕ್ಕೇರಿದ್ದಾರೆ.