ದೆಹಲಿ, ಏ 06 (DaijiworldNews/AA): ಐಪಿಎಲ್ 17ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿದ್ದು, ಇದೀಗ ಸ್ಟಾರ್ ಆಟಗಾರನೊಬ್ಬ ಗಾಯದ ಸಮಸ್ಯೆಯಿಂದಾಗಿ ತಂಡದಿಂದ ಹೊರಕ್ಕುಳಿದ್ದಾರೆ. ಈ ಮೂಲಕ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಆಟಗಾರ ಕುಲ್ದೀಪ್ ಯಾದವ್ ತೊಡೆಸಂಧು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ವೈದ್ಯರು ಅವರಿಗೆ ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದು, ಇದೇ ಕಾರಣದಿಂದಾಗಿ ಅವರು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಭಾಗವಹಿಸಿರಲಿಲ್ಲ.
ಸದ್ಯ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ಹೊರಗುಳಿದಿರುವ ಕುಲ್ದೀಪ್ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ಹೋಗುವ ಸಾಧ್ಯತೆ ಇದ್ದು, ಅಲ್ಲಿ ರಿಹ್ಯಾಬ್ಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕುಲ್ದೀಪ್ ಯಾದವ್ ಮತ್ತೆ ತಂಡವನ್ನು ಸೆರಿಕೊಳ್ಳಬೇಕಿದ್ದರೆ ಎನ್ಸಿಎ ಕಡೆಯಿಂದ ಫಿಟ್ನೆಸ್ ಸರ್ಟಿಫಿಕೇಟ್ ಪಡೆಯಬೇಕು. ಆದ್ದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೊದಲಾರ್ಧದ ಪಂದ್ಯಗಳಿಗೆ ಕುಲ್ದೀಪ್ ಯಾದವ್ ಲಭ್ಯವಿರುವುದಿಲ್ಲ ಎನ್ನಲಾಗಿದೆ.