ಚಂಡೀಗಢ, ಏ 19 (DaijiworldNews/MS): ಗುರುವಾರ ಚಂಡೀಗಢದಲ್ಲಿ ನಡೆದಿದ್ದ ಪಂಜಾಬ್ ಕಿಂಗ್ಸ್ ವಿರುದ್ದದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 33ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದಿದೆ. ಆದರೆ ಪಂದ್ಯ ಗೆದ್ದರೂ ಹಾರ್ದಿಕ್ಗೆ ಬಿಸಿಸಿಐ ಶಾಕ್ ನೀಡಿದೆ. ಪಾಂಡ್ಯಗೆ 12 ಲಕ್ಷ ರೂಪಾಯಿ ದಂಡ ವಿಧಿಸಿದ್ದು ಕೋಡ್ ಆಫ್ ಕಂಡಕ್ಟ್ನ ಮುರಿದ ಕಾರಣ ನೀಡಲಾಗಿದೆ. ನಿಗದಿತ ಸಮಯಕ್ಕೆ ಓವರ್ ಪೂರ್ಣಗೊಳಿಸದ ಕಾರಣ ಈ ದಂಡ ಹಾಕಲಾಗಿದೆ.
20 ಓವರ್ಗಳನ್ನು ಪೂರ್ಣಗೊಳಿಸಲು ಬಿಸಿಸಿಐ ನಿಗದಿತ ಸಮಯ ನೀಡಿದ್ದು ಆದರೆ ಅದನ್ನು ಪೂರ್ಣಗೊಳಿಸಲು ಅವರಿಗೆ ಸಾಧ್ಯವಾಗಿಲ್ಲ. ನಿಧಾನಗತಿಯ ಬೌಲಿಂಗ್ ಕಾರಣ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ 12 ಲಕ್ಷ ರೂ. ಗಳ ದಂಡವನ್ನು ವಿಧಿಸಲಾಗಿದೆ. ಇಷ್ಟು ಮ್ಯಾಚ್ಗಳಲ್ಲಿ ಇದೇ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಈ ರೀತಿ ದಂಡ ವಿಧಿಸಿಕೊಳ್ಳುತ್ತಿದ್ದಾರೆ.
ಪ್ರಸಕ್ತ ಆವೃತ್ತಿಯಲ್ಲಿ ನಿಧಾನಗತಿಯ ಬೌಲಿಂಗ್ ಸಂಬಂಧ ಮುಂಬೈ ಇಂಡಿಯನ್ಸ್ ಪಾಲಿಗೆ ಇದು ಮೊದಲ ಪ್ರಮಾದವಾಗಿದೆ. ಇದು ಮತ್ತೆ ಮತ್ತೆ ಮರುಕಳಿಸಿದರೆ ಮುಂಬೈ ಇಂಡಿಯನ್ಸ್ ತಂಡ ಸಂಕಷ್ಟಕ್ಕೆ ಸಿಲುಕಬಹುದಾಗಿದೆ.