ಮುಂಬೈ,ಮೇ.2 (DaijiworldNews/AK): ಪಾಕಿಸ್ತಾನ್ ಟಿ20 ತಂಡವನ್ನು ಪ್ರಕಟಿಸಿದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾದ 18 ಸದಸ್ಯರ ತಂಡವನ್ನು ಬಾಬರ್ ಆಝಂ ಮುನ್ನಡೆಸಲಿದ್ದಾರೆ. ಈ ತಂಡದಲ್ಲಿ ಪಾಕ್ ವೇಗಿ ಹ್ಯಾರಿಸ್ ರೌಫ್ ಸ್ಥಾನಗಿಟ್ಟಿಸಿಕೊಂಡಿದ್ದಾರೆ.
ಏಕದಿನ ವಿಶ್ವಕಪ್ 2023 ರಲ್ಲಿ ಕಳಪೆ ಪ್ರದರ್ಶನ ನೀಡಿದ್ದರಿಂದ ಹ್ಯಾರಿಸ್ ರೌಫ್ ಅವರನ್ನು ಪಾಕಿಸ್ತಾನ್ ತಂಡದಿಂದ ಕೈ ಬಿಡಲಾಗಿತ್ತು. ಇದೀಗ ಟಿ20 ವಿಶ್ವಕಪ್ಗೂ ಮುನ್ನ ಆಯ್ಕೆ ಮಾಡಲಾದ ತಂಡದಲ್ಲಿ ಮತ್ತೆ ಸ್ಥಾನ ಪಡೆದಿರುವುದು ವಿಶೇಷ.ಇನ್ನು ಈ ತಂಡದಲ್ಲಿ ಎಡಗೈ ವೇಗಿ ಮೊಹಮ್ಮದ್ ಅಮೀರ್ ಹಾಗೂ ಇಮಾದ್ ವಾಸಿಂ ಸ್ಥಾನ ಪಡೆದಿದ್ದಾರೆ. ಇಮಾದ್ ಹಾಗೂ ಅಮೀರ್ ಈ ಹಿಂದೆ ನಿವೃತ್ತಿ ಘೋಷಿಸಿದ್ದರು.
ಇದೀಗ ಈ ಇಬ್ಬರು ಆಟಗಾರರು ಪಾಕ್ ತಂಡದಲ್ಲಿ ಕಾಣಿಸಿಕೊಂಡಿದ್ದು, ಈ ಮೂಲಕ ಟಿ20 ವಿಶ್ವಕಪ್ನಲ್ಲೂ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಅಂದಹಾಗೆ ಟಿ20 ವಿಶ್ವಕಪ್ಗೆ ಪಾಕಿಸ್ತಾನ್ ತಂಡವನ್ನು ಫೈನಲ್ ಮಾಡಲಾಗಿಲ್ಲ ಎಂಬುದನ್ನು ಪಿಸಿಬಿ ಸ್ಪಷ್ಟಪಡಿಸಿದೆ.ಮೇ 22 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದ ಬಳಿಕ ಟಿ20 ವಿಶ್ವಕಪ್ಗಾಗಿ 15 ಸದಸ್ಯರ ತಂಡವನ್ನು ಪ್ರಕಟಿಸುವುದಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತಿಳಿಸಿದೆ.
ಪಾಕಿಸ್ತಾನ್ ಟಿ20 ತಂಡದಲ್ಲಿ ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ಇರ್ಫಾನ್ ಖಾನ್, ನಸೀಮ್ ಶಾ, ಸೈಮ್ ಅಯ್ಯೂಬ್, ಸಲ್ಮಾನ್ ಅಲಿ ಅಗಾ, ಶಾದಾಬ್ ಖಾನ್, ಶಾಹೀನ್ ಶಾ ಆಫ್ರಿದಿ ಮತ್ತು ಉಸ್ಮಾನ್ ಖಾನ್.