ಟ್ರಿನಿಡಾಡ್, ಜೂ. 18(DaijiworldNews/AK): ಟಿ20 ವಿಶ್ವಕಪ್ನ 39ನೇ ಪಂದ್ಯದ ಮೂಲಕ ನ್ಯೂಝಿಲೆಂಡ್ ವೇಗಿ ಲಾಕಿ ಫರ್ಗುಸನ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಟ್ರಿನಿಡಾಡ್ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ಹಾಗೂ ಪಪುವಾ ನ್ಯೂಗಿನಿಯಾ ತಂಡಗಳೂ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಪುವಾ ನ್ಯೂ ಗಿನಿಯಾ ತಂಡವು 19.4 ಓವರ್ಗಳಲ್ಲಿ 78 ರನ್ಗಳಿಸಿ ಆಲೌಟ್ ಆಗಿದೆ.
ಲಾಕಿ ಫರ್ಗುಸನ್ ಒಂದೇ ಒಂದು ರನ್ ನೀಡದೇ 3 ವಿಕೆಟ್ ಕಬಳಿಸಿರುವುದು. ಅಂದರೆ 4 ಓವರ್ಗಳನ್ನು ಎಸೆದಿದ್ದ ಫರ್ಗುಸನ್ ಯಾವುದೇ ರನ್ ನೀಡದೇ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ 4 ಓವರ್ಗಳಲ್ಲಿ ಒಂದೇ ಒಂದು ರನ್ ನೀಡದ ಮೊದಲ ಬೌಲರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಹಾಗೆಯೇ ಟಿ20 ಕ್ರಿಕೆಟ್ ಇತಿಹಾಸದಲ್ಲಿ 4 ಓವರ್ಗಳಲ್ಲಿ 0 ರನ್ಗೆ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನೂ ಸಹ ಲಾಕಿ ಫರ್ಗುಸನ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸಾದ್ ಬಿನ್ ಝಫರ್ ಹೆಸರಿನಲ್ಲಿತ್ತು.
2021 ರಲ್ಲಿ ಪನಾಮ ವಿರುದ್ಧದ ಪಂದ್ಯದಲ್ಲಿ ಕೆನಡಾ ಬೌಲರ್ ಸಾದ್ ಬಿನ್ ಝಫರ್ 4 ಓವರ್ಗಳಲ್ಲಿ ಯಾವುದೇ ರನ್ ನೀಡದೇ 2 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ನ್ಯೂಝಿಲೆಂಡ್ ತಂಡ ಬಲಗೈ ವೇಗಿ ಮುರಿದಿದ್ದಾರೆ.
ಪಪುವಾ ನ್ಯೂಗಿನಿಯಾ ವಿರುದ್ಧದ ಪಂದ್ಯದಲ್ಲಿ 4 ಮೇಡನ್ ಓವರ್ಗಳನ್ನು ಎಸೆದಿರುವ ಲಾಕಿ ಫರ್ಗಸನ್ 0 ರನ್ಗೆ 3 ವಿಕೆಟ್ ಕಬಳಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಶೂನ್ಯ ರನ್ಗೆ ಅತ್ಯಧಿಕ ವಿಕೆಟ್ ಕಬಳಿಸಿ ಬೌಲರ್ ಎನಿಸಿಕೊಂಡಿದ್ದಾರೆ.