ನವದೆಹಲಿ, ಜೂ.30(DaijiworldNews/Ak): 17 ವರ್ಷಗಳ ಬಳಿಕ ಟೀಂ ಇಂಡಿಯಾ ಟಿ20 ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಶನಿವಾರ T20 ಗೆ ನಿವೃತ್ತಿ ಘೋಷಿಸಿದ್ದಾರೆ.
ಐತಿಹಾಸಿಕ ವಿಜಯದ ಬಳಿಕ ಕೊಹ್ಲಿ ತಮ್ಮ ನಿವೃತ್ತಿಯನ್ನು ಘೋಷಿಸಿದರೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ನಿವೃತ್ತಿ ಘೋಷಿಸಿದರು.
ಟಿ20 ವಿಶ್ವಕಪ್ ಟ್ರೋಫಿಯನ್ನು ಭಾರತದ ಮಡಿಲಿಗಿಟ್ಟು ಇಬ್ಬರೂ ಕ್ರಿಕೆಟಿಗರು ವಿದಾಯ ಹೇಳಿದ್ದಾರೆ.ಇದು ನನ್ನ ಕೊನೆಯ ಪಂದ್ಯವೂ ಆಗಿತ್ತು. ವಿದಾಯ ಹೇಳಲು ಇದಕ್ಕಿಂತ ಉತ್ತಮ ಸಮಯವಿಲ್ಲ. ಪ್ರಶಸ್ತಿ ಗೆಲುವನ್ನು ಪದಗಳಲ್ಲಿ ಹೇಳುವುದು ತುಂಬಾ ಕಷ್ಟ ಎಂದು ರೋಹಿತ್ ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಟಿ20ಯಲ್ಲಿ ರೋಹಿತ್ ಶರ್ಮಾ ಒಟ್ಟು 159 ಪಂದ್ಯಗಳನ್ನಾಡಿದ್ದು, 4,231 ರನ್ ಗಳಿಸಿದ್ದಾರೆ. ಟಿ20 ಯಲ್ಲಿ 32 ಅರ್ಧಶತಕ ಮತ್ತು 5 ಶತಕ ಸಿಡಿಸಿ ಮಿಂಚಿದ್ದಾರೆ. ವಿರಾಟ್ ಕೊಹ್ಲಿ 125 ಪಂದ್ಯಗಳನ್ನಾಡಿದ್ದು, ಒಟ್ಟು 4,188 ರನ್ ಗಳಿಸಿದ್ದಾರೆ. ಕೊಹ್ಲಿ 38 ಅರ್ಧಶತಕ ಮತ್ತು 1 ಶತಕ ಸಿಡಿಸಿದ್ದಾರೆ.
ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ನೀಡಿದ್ದ 177 ರನ್ ಗುರಿ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾ ಉತ್ತಮ ಪ್ರದರ್ಶನ ನೀಡಿತ್ತು.