ಕೊಲೊಂಬೊ, ಜು.21(DaijiworldNews/AK):ಟೀಂ ಇಂಡಿಯಾ ಮಹಿಳಾ ತಂಡದ ಆಫ್ ಸ್ಪಿನ್ನರ್ ಶ್ರೇಯಾಂಕಾ ಪಾಟೀಲ್ ಎಡಗೈಗೆ ಗಾಯವಾಗಿದ್ದು, ಮಹಿಳಾ ಏಷ್ಯಾ ಕಪ್ 2024 ನಿಂದ ಹೊರಗುಳಿದಿದ್ದಾರೆ.
ಶ್ರೀಲಂಕಾದ ಡಂಬುಲ್ಲಾದಲ್ಲಿರುವ ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಮಹಿಳಾ ಏಷ್ಯಾ ಕಪ್ 2024 ರ 5ನೇ ಪಂದ್ಯದಲ್ಲಿ ಟೀಂ ಇಂಡಿಯಾ ವನಿತೆಯರು, ಯುಎಇ ತಂಡದೊಂದಿಗೆ ಸೆಣಸಲಿದ್ದಾರೆ.
ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ, ಶ್ರೇಯಾಂಕಾ ಎಡಗೈಯ ನಾಲ್ಕನೇ ಬೆರಳಿಗೆ ಗಾಯವಾಗಿದೆ ಎಂದು ತಿಳಿಸಿದೆ. ಶ್ರೇಯಾಂಕಾ ಬದಲಿಗೆ ವುಮೆನ್ ಇನ್ ಬ್ಲೂ ತಂಡದಲ್ಲಿ ತನುಜಾ ಕನ್ವರ್ (21) ಆಡಲಿದ್ದಾರೆ.ದಂಬುಲ್ಲಾದಲ್ಲಿ ನಡೆದ ಪಾಕಿಸ್ತಾನ ಮಹಿಳೆಯರ ವಿರುದ್ಧದ ಪಂದ್ಯದಲ್ಲಿ ಶ್ರೇಯಾಂಕಾ ಅದ್ಭುತವಾಗಿ ಬೌಲಿಂಗ್ ಮಾಡಿದ್ದರು.