ಮುಂಬೈ, ಜು 24(DaijiworldNews/ AK): ಭಾರತ ಮತ್ತು ಶ್ರೀಲಂಕಾ ನಡುವಣ ಸರಣಿಯು ಶನಿವಾರದಿಂದ ಶುರುವಾಗಲಿದೆ. ಆದರೆ ಅದಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಪ್ರಮುಖ ವೇಗಿ ದುಷ್ಮಂತ ಚಮೀರಾ ಈ ಸರಣಿಯಿಂದ ಹೊರಗುಳಿದಿದ್ದಾರೆ.
ಇತ್ತೀಚೆಗೆ ಮುಗಿದ ಲಂಕಾ ಪ್ರೀಮಿಯರ್ ಲೀಗ್ನ ಪಂದ್ಯದ ವೇಳೆ ಚಮೀರಾ ಗಾಯಗೊಂಡಿದ್ದರು. ಈ ಗಾಯದಿಂದ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ತೆಗೆದುಕೊಳ್ಳಲಿದ್ದಾರೆ. ಹೀಗಾಗಿ ಭಾರತದ ವಿರುದ್ಧದ ಸರಣಿಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.
ಭಾರತ ಮತ್ತು ಶ್ರೀಲಂಕಾ ನಡುವಣ ಟಿ20 ಸರಣಿಯು ಜುಲೈ 27 ರಿಂದ ಶುರುವಾಗಲಿದ್ದು, ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತದೆ. ಇದಾದ ಬಳಿಕ 3 ಪಂದ್ಯಗಳ ಏಕದಿನ ಸರಣಿ ಕೂಡ ನಡೆಯಲಿದೆ.
ಈ ಎರಡೂ ಸರಣಿಗಳಿಗೆ ಅಲಭ್ಯರಾಗುವುದಾಗಿ ದುಷ್ಮಂತ ಚಮೀರಾ ಶ್ರೀಲಂಕಾ ಕ್ರಿಕೆಟ್ಗೆ ಬೋರ್ಡ್ಗೆ ತಿಳಿಸಿದ್ದಾರೆ. ಹೀಗಾಗಿ ಟಿ20 ಸರಣಿ ಆರಂಭಕ್ಕೂ ಮುನ್ನ ಬದಲಿ ಆಟಗಾರನನ್ನು ಪ್ರಕಟಿಸುವ ಸಾಧ್ಯತೆಯಿದೆ.