ಪ್ಯಾರಿಸ್, ಜು.27(DaijiworldNews/AA): 2024ರ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮೊದಲ ದಿನವೇ ಭಾರತಕ್ಕೆ ಶುಭ ಸುದ್ದಿ ದೊರೆತಿದೆ. ಮಹಿಳೆಯರ ಸಿಂಗಲ್ಸ್ನಲ್ಲಿ ಮನು ಭಾಕರ್ ಫೈನಲ್ಗೆ ಎಂಟ್ರಿ ನೀಡಿದ್ದಾರೆ.
22 ವರ್ಷದ ಮನು ಭಾಕರ್ ಅವರು 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಅರ್ಹತಾ ಸ್ಪರ್ಧೆಯಲ್ಲಿ 600 ಅಂಕಗಳಿಗೆ 580 ಅಂಕಗಳನ್ನು ಗಳಿಸುವ ಮೂಲಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆಯುವುದರೊಂದಿಗೆ ಫೈನಲ್ ಪ್ರವೇಶಿಸಿದ್ದಾರೆ. ಅರ್ಹತಾ ಸುತ್ತಿನಲ್ಲಿ ಒಟ್ಟು 45 ಅಥ್ಲೀಟ್ಗಳು ಭಾಗವಹಿಸಿದ್ದು, ಈ ಪೈಕಿ ಮನು ಮೂರನೇ ಸ್ಥಾನ ಗಳಿಸುವ ಮೂಲಕ ಭಾರತಕ್ಕೆ ಸಿಹಿ ಸುದ್ದಿ ಕೊಟ್ಟಿದ್ದಾರೆ.
ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವೈಯಕ್ತಿಕ ಸ್ಪರ್ಧೆಯಲ್ಲಿ ಒಲಿಂಪಿಕ್ಸ್ ಫೈನಲ್ ತಲುಪಿದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಭಾಜನರಾಗಿದ್ದಾರೆ. ಇನ್ನು ಇದೇ ಅದೇ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಾರತದ ಇನ್ನೋರ್ವ ಶೂಟರ್ ರಿದಮ್ ಸಾಂಗ್ವಾನ್ ಅವರು 15ನೇ ಸ್ಥಾನ ಪಡೆಯುವ ಮೂಲಕ ಫೈನಲ್ಗೆ ಅರ್ಹತೆ ಪಡೆಯುವಲ್ಲಿ ವಿಫಲರಾದರು.