ಮುಂಬೈ, ಆ 2(DaijiworldNews/ AK): ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಮೊದಲ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ಸಜ್ಜಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ನಾಯಕ ಚರಿತ್ ಅಸಲಂಕಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಶ್ರೀಲಂಕಾ ಪರ ಮೊಹಮ್ಮದ್ ಶಿರಾಜ್ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಲಿದ್ದಾರೆ. ಇತ್ತ ಟೀಂ ಇಂಡಿಯಾದಲ್ಲಿ ರಿಷಬ್ ಪಂತ್ ಬದಲಿಗೆ ಕೆಎಲ್ ರಾಹುಲ್ ಅವರನ್ನು ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಆಗಿ ಆಯ್ಕೆ ಮಾಡಲಾಗಿದೆ. ಜೊತೆಗೆ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು, ಶಿವಂ ದುಬೆ ಕೂಡ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆದಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಿವಂ ದುಬೆ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಅವಿಷ್ಕಾ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಸದಿರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಜನಿತ್ ಲಿಯಾನಗೆ, ವನಿಂದು ಹಸರಂಗಾ, ದುನಿತ್ ವೆಲಾಲಗೆ, ಅಕಿಲಾ ಧನಂಜಯ್, ಅಸಿತ ಫೆರ್ನಾಂಡೋ, ಮೊಹಮ್ಮದ್ ಶಿರಾಜ್.
ಈ ಸರಣಿಯೊಂದಿಗೆ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿಗೆ ಸಿದ್ಧತೆ ಆರಂಭಿಸಲಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ 9 ಪಂದ್ಯಗಳನ್ನು ಆಡಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ಟೀಂ ಇಂಡಿಯಾಗೆ ಪ್ರತಿಯೊಂದು ಪಂದ್ಯವೂ ಮಹತ್ವದ್ದಾಗಿದೆ. ಈ ಕಾರಣಕ್ಕೆ ಈ ಸರಣಿಗೂ ಮುನ್ನ ವಿರಾಮಕ್ಕೆ ತೆರಳಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರನ್ನೂ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.