ಪ್ಯಾರಿಸ್, ಆ.06(DaijiworldNews/AA): ಭಾರತದ ಚಿನ್ನ ಹುಡುಗ ನೀರಜ್ ಚೋಪ್ರಾ ಅವರು ತಮ್ಮ ಮೊದಲ ಪ್ರಯತ್ನದಲ್ಲೇ ಪ್ಯಾರಿಸ್ ಒಲಿಂಪಿಕ್ಸ್ ಪುರುಷರ ಜಾವೆಲಿನ್ ನಲ್ಲಿ ಫೈನಲ್ಗೆ ಲಗ್ಗೆ ಇಟಿದ್ದಾರೆ.
ಇಂದು ನಡೆದ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ 89.34 ಮೀ ಎಸೆದು ನೀರಜ್ ಚೋಪ್ರಾ ಅವರು ಅಂತಿಮ ಸುತ್ತಿಗೆ ಅರ್ಹತೆ ಪಡೆದುಕೊಂಡಿದ್ದಾರೆ. ಈ ಮೂಲಕ ನೀರಜ್ ಚೋಪ್ರಾ ಅವರು ಚಿನ್ನ ಗೆಲ್ಲುವ ಭರವಸೆ ಮೂಡಿಸಿದ್ದಾರೆ.
89.34 ಮೀಟರ್ ದೂರ ಎಸೆತವು ಜಾಗತಿಕ ಚಾಂಪಿಯನ್ಶಿಪ್ನಲ್ಲಿ ನೀರಜ್ ಚೋಪ್ರಾ ಅವರ ಅತ್ಯುತ್ತಮ ಎಸೆತವಾಗಿದೆ. ಈ ಹಿಂದೆ ವಿಶ್ವ ಚಾಂಪಿಯನ್ ಮೇನಲ್ಲಿ ನಡೆದ ದೋಹಾ ಡೈಮಂಡ್ ಲೀಗ್ನಲ್ಲಿ 88.36 ಮೀ. ಎಸೆದಿದ್ದರು.