ಪ್ಯಾರಿಸ್, ಆ.09(DaijiworldNews/AA): ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್ನ ಜಾವೆಲಿನ್ ಎಸೆತದಲ್ಲಿ ಬೆಳ್ಳಿಯ ಪದಕ ತಮ್ಮದಾಗಿಸಿಕೊಂಡಿದ್ದು, ಭಾರತಕ್ಕೆ 5ನೇ ಪದಕ ದೊರೆತಿದೆ.
ಟೋಕಿಯೋ ಒಲಿಂಪಿಕ್ಸ್ನಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದ ನೀರಜ್ ಚೋಪ್ರಾ ಅವರು ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಸತತ ಎರಡು ಒಲಿಂಪಿಕ್ಸ್ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಇದೀಗ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ನೀರಜ್ ಚೋಪ್ರಾ ಅವರು 89.45 ಮೀ. ದೂರ ಜಾವೆಲಿನ್ ಎಸೆದು ಬೆಳ್ಳಿ ಪಡೆದುಕೊಂಡರೆ, ಪಾಕಿಸ್ತಾನದ ಅರ್ಶದ್ ನದೀಂ ದಾಖಲಿಯ 92.97 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನವನ್ನ ತಮ್ಮದಾಗಿಸಿಕೊಂಡಿದ್ದಾರೆ. ಇನ್ನು ಗ್ರೆನೆಡಾದ ಆ್ಯಂಡರ್ಸನ್ ಪೀಟರ್ 88.54 ಮೀಟರ್ಸ್ ದೂರ ಜಾವೆಲಿನ್ ಎಸೆದು ಕಂಚು ಪಡೆದುಕೊಂಡರು.