ಮಂಗಳೂರು,ಡಿ.08(DaijiworldNews/TA): ಮಹಾನಗರ ಪಾಲಿಕೆಯ ಪ್ರತಿಪಕ್ಷ ನಾಯಕರಾಗಿ ಅನಿಲ್ ಕುಮಾರ್ ಅವರು ಶನಿವಾರ ಮನಪಾ ವಿಪಕ್ಷ ನಾಯಕರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಎಂಎಲ್ಸಿ ಐವನ್ ಡಿ’ಸೋಜಾ, ಮಾಜಿ ಶಾಸಕ ಜೆಆರ್ ಲೋಬೊ, ಪ್ರವೀಣ್ ಚಂದ್ರ ಆಳ್ವಾ, ದ.ಕ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಲಾರೆನ್ಸ್ ಡಿ’ಸೋಜಾ ಸೇರಿದಂತೆ ಮನಪಾ ಸದಸ್ಯರು ಉಪಸ್ಥಿತರಿದ್ದರು.