ಲಕ್ನೋ, ಡಿ.15(DaijiworldNews/AA): ದೇಶಾದ್ಯಂತ ಸಂಚಲನ ಮೂಡಿಸಿರುವ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಪತ್ನಿ ನಿಖಿತಾ ಸಿಂಘಾನಿಯಾಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉತ್ತರ ಪ್ರದೇಶದಲ್ಲಿ ಅತುಲ್ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಸಿಂಘಾನಿಯಾ ಅವರನ್ನು ಬಂಧಿಸಲಾಗಿತ್ತು. ಇದೀಗ ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಲನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇದೀಗ ಮೂವರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮೂವರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪತಿ ಅತುಲ್ ಆತ್ಮಹತ್ಯೆಗೆ ಶರಣಾದ ಬಳಿಕ ನಿಖಿತಾ ಪರಾರಿಯಾಗಿದ್ದರು. ಆಕೆಗಾಗಿ ಹುಡುಕಾಟ ಆರಂಭಿಸಿದ್ದ ಮಾರತ್ತಹಳ್ಳಿ ಪೊಲೀಸರು 3 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು.