ಬೆಂಗಳೂರು, ಡಿ.15(DaijiworldNews/AA): ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಬಿ.ವೈ. ವಿಜಯೇಂದ್ರ ಪರ ಬಣದ ಸಭೆ ನಡೆಯುತ್ತಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಅವರು, ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ತಿಳಿಸಿದ್ದಾರೆ.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆಗೆ ಇನ್ನಷ್ಟು ಬಲ ತುಂಬುವ ಕಾರ್ಯಕ್ರಮದಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲ ಹಿರಿಯರ ಸಭೆ ಕರೆಯಲಾಗುವುದು. ಭಾರತೀಯ ಜನತಾ ಪಾರ್ಟಿ ಕೂಡು ಕುಟುಂಬವಿದ್ದಂತೆ ಎಂದು ಹೇಳಿದ್ದಾರೆ.