ಬೆಂಗಳೂರು, ಏ 08 (DaijiworldNews/HR): 2021-22ನೇ ಶೈಕ್ಷಣಿಕ ವರ್ಷ ಏಪ್ರಿಲ್ 9ರಂದು ಮುಕ್ತಾಯವಾಗಲಿದ್ದು, ಈ ನಡುವೆ ಏ.14ರಂದು ಬರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಪ್ರತಿ ವರ್ಷದಂತೆ ತಪ್ಪದೇ ಶಾಲೆಗಳಲ್ಲಿ ಆಚರಿಸುವಂತೆ ಶಿಕ್ಷಣ ಇಲಾಖೆ ಆದೇಶ ನೀಡಿದೆ.
ಈ ಬಗ್ಗೆ ಆದೇಶ ಹೊರಡಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು, ರಾಜ್ಯದಲ್ಲಿ 2021-22ನೇ ಶೈಕ್ಷಣಿಕ ವರ್ಷ ಏಪ್ರಿಲ್ 9ರಂದು ಮುಕ್ತಾಯವಾಗುತ್ತದೆ. ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಆಚರಿಸುವಂತೆ ತಿಳಿಸಲಾಗಿದೆ ಎಂದಿದ್ದಾರೆ.
ಇನ್ನು 14ರಂದು ತಪ್ಪದೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್ ಡಿ ಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಕೊರೊನಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು, ಪ್ರತಿ ವರ್ಷದಂತೆ ಆಚರಿಸಲು ಸೂಚಿಸಿದ್ದಾರೆ.