ಛತ್ತೀಸ್ಗಡ, ಜ 01(DaijiworldNews/HR): ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳು ಚೇಳು ಕಚ್ಚಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತಪಟ್ಟ ಬಾಲಕಿಯನ್ನು 2ನೇ ತರಗತಿ ವಿದ್ಯಾರ್ಥಿನಿ ದಿವ್ಯಾ ಮಾಂಡವಿ ಎಂದು ಗುರುತಿಸಲಾಗಿದೆ.
ಬಿಡುವಿನ ವೇಳೆ ಆಟವಾಡುತ್ತಿದ್ದಾಗ ಚೇಳು ಕಚ್ಚಿದ್ದು,ಆಕೆಯನ್ನು ಮೊದಲು ಸಮೀಪದ ದಾಧಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮತ್ತು ನಂತರ ಬೆಮೆತಾರಾ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುವಾಗಲೇ ದಾರಿಯಲ್ಲೇ ಬಾಲಕಿ ಸಾವನ್ನಪ್ಪಿದ್ದಾಳೆ.
ಘಟನೆಯ ಬಗ್ಗೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಸಿಎಂ ನಿರ್ದೇಶನದ ಮೇರೆಗೆ ಬೆಮೆತಾರಾ ಜಿಲ್ಲಾ ಶಿಕ್ಷಣಾಧಿಕಾರಿಗಳು ಬಾಲಕಿಯ ತಂದೆಗೆ 1 ಲಕ್ಷ ರೂ. ಚೆಕ್ ನೀಡಿದ್ದಾರೆ.