ಉಡುಪಿ, ಆ 22 (DaijiworldNews/HR): ಉಡುಪಿ ಜಿಲ್ಲೆ ರಚನೆಯಾಗಿ ಆಗಸ್ಟ್ 25 ಕ್ಕೆ 25 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭ ದ ಲೋಗೋ ಮತ್ತು ವೆಬ್ ಸೈಟ್ ಅನ್ನು ಬಿಡುಗಡೆಗೊಳಿಸಲಾಯಿತು. ರಜತ ಮಹೋತ್ಸವದ ಲೋಗೋವನ್ನು ಉಡುಪಿ ಶಾಸಕರಾದ ರಘುಪತಿ ಭಟ್ ಬಿಡುಗಡೆಗೊಳಿಸಿದರು. ಕಾಫು ಶಾಸಕ ಲಾಲಾಜಿ ಮೆಂಡನ್ ಇದೇ ಸಂಧರ್ಭದಲ್ಲಿ ರಜತ ಮಹೋತ್ಸವದ ವೆಬ್ ಸೈಟ್ ಅನ್ನು ಅನಾವರಣಗೊಳಿಸಿದರು.
ಆಗಸ್ಟ್ 25 ರಿಂದ ಜನವರಿ 25 ರ ವರೆಗೆ ಉಡುಪಿ ಜಿಲ್ಲೆಯ ರಜತಮಹೋತ್ಸವವು ನಡೆಯಲಿದೆ. ಲೋಗೋ ಬಿಡುಗಡೆ ಗೊಳಿಸಿ ಮಾತನಾಡಿದ ಶಾಸಕ ರಘುಪತಿ ಭಟ್, ರಜತ ಮಹೋತ್ಸವದ ಸಂಧರ್ಭದಲ್ಲಿ ಸೈನ್ಯಕ್ಕೆ ಹೆಚ್ಚಿನ ಯುವಕರನ್ನು ಆಕರ್ಷಿಸುವ ನಿಟ್ಟಿನಲ್ಲಿ 75 ಕಿಲೋ ಮೀಟರ್ ಅಗ್ನಿಪಥ್ ರ್ಯಾಲಿ ನಡೆಯಲಿದೆ. ಸುಮಾರು 500 ವಿದ್ಯಾರ್ಥಿಗಳು ಇದರಲ್ಲಿ ಸಂಪೂರ್ಣವಾಗಿ ಭಾಗವಹಿಸಲಿದ್ದಾರೆ. ಆಗಸ್ಟ್ 25 ರಂದು 3 ಗಂಟೆಗೆ ಉಡುಪಿ ಬೋರ್ಡ್ ಹೈಸ್ಕೂಲ್ ನಿಂದ ಅಜ್ಜರಕಾಡು ಮೈದಾನದವರೆಗೆ ಬೃಜಹತ್ ಶೋಭಾಯಾತ್ರೆ ನಡೆಯಲಿದೆ. ಇದರಲ್ಲಿ ಸುಮಾರು 5 ರಿಂಸ 6 ಸಾವಿರ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಪ್ರತಿ ಪಂಚಾಯತ್ ನಿಂದ ಕಳೆದ 25 ವರ್ಷಗಳಲ್ಲಿ ಸೇವೆ ಸಲ್ಲಿರುವ ಜನಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು, ಬಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದಾರೆ ಎಂದರು.
1997 ರಲ್ಲಿ ಜಿಲ್ಲೆ ರಚನೆ ಆಗುವ ಸಂಧರ್ಭದಲ್ಲಿ ಇದ್ದ ಶಾಸಕರು ಕೂಡಾ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಬಾಗವಹಿಸುವರು. ಸುಮಾರು 15 ಸಾವಿರ ಜನರ ನಿರೀಕ್ಷೆ ಇದ್ದುಅಜ್ಜರಕಾಡು ಮೈದಾನದಲ್ಲಿ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸುಮಾರು 80 ಲಕ್ಷ ದಿಂದ 1 ಕೋಟಿಯವರೆಗೆ ವೆಚ್ಚವನ್ನು ಅಂದಾಜಿಸಲಾಗಿದೆ. ಸಾರ್ವಜನಿಕರು, ಸಂಘ ಸಂಸ್ಥೆಗಳ ಸಹಕಾರದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಪ್ರತೀ ತಿಂಗಳ 25 ನೇ ತಾರೀಕಿನಂದು ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಸಮಾರೋಪ ಕಾರ್ಯಕ್ರಮವನ್ನು ಜನವರಿ 25, 2023 ರಂದು ನಡೆಸಲಾಗುವುದು ಎಂದರು.
ಇದೇ ಸಂಧರ್ಭದಲ್ಲಿ ಸಂಘ ಸಂಸ್ಥೆಯವರ ಸಲಹೆ, ಸಹಕಾರ, ಸಹಭಾಗಿತ್ವ ನೀಡುವಂತೆ ವಿವಿಧ ಸಂಘ ಸಂಸ್ಥೆಗಳ ಪಧಾಧಿಕಾರಿಗಳ ಜೊತೆಗೆ ಸಭೆಯನ್ನು ಕೂಡಾ ನಡೆಸಲಾಯಿತು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್. ಮೆಂಡನ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಸನ್ನ ಎಚ್, ಅಪರ ಜಿಲ್ಲಾಧಿಕಾರಿಗಳಾದ ವೀಣಾ, ಸಹಾಯಕ ಆಯುಕ್ತರಾದ ರಾಜು ಕೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಟಿ ಉಪಸ್ಥಿತರಿದ್ದರು.