ಮುಂಬಯಿ, ಆ 24 (DaijiwroldNews/HR): ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರಿಗೆ ಮತ್ತೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ನನ್ನ ಜೊತೆಗೆ ಇದ್ದವರು ಅಲ್ಲದೆ ನನ್ನ ಸಂಪರ್ಕದಲ್ಲಿದ್ದವರು ಕೂಡಲೇ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು ಅಮಿತಾಬ್ ಬಚ್ಚನ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ಇದು ಎರಡನೇ ಬಾರಿ ಈ ಹಿಂದೆ 2020 ರಲ್ಲಿ ಕೂಡಾ ಪಾಸಿಟಿವ್ ತಗುಲಿತ್ತು.