ಬಿಹಾರ, ಆ 24 (DaijiwroldNews/HR): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿಕೂಟ ಸರ್ಕಾರ ರಾಜ್ಯ ವಿಧಾನಸಭೆಯಲ್ಲಿ ಬುಧವಾರಂದು ವಿಶ್ವಾಸಮತ ಗೆದ್ದಿದೆ.
ಇಂದು ನಿತೀಶ್ ಕುಮಾರ್ ನೇತೃತ್ವದ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆದಿದೆ.
ಇನ್ನು ನಿತೀಶ್ ನೇತೃತ್ವದ ಮಹಾಘಟಬಂಧನ್ ಮೈತ್ರಿ ಸರ್ಕಾರದ ಬಹುಮತವನ್ನು ಸಾಬೀತುಪಡಿಸಲು ವಿಶ್ವಾಸಮತ ಯಾಚನೆಗೂ ಮುನ್ನ ಭಾರತೀಯ ಜನತಾ ಪಕ್ಷದ ವಿಜಯ್ ಕುಮಾರ್ ಸಿನ್ಹಾ ಅವರು ಇಂದು ಬಿಹಾರ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.