ದೆಹಲಿ, ಸೆ.26 (DaijiworldNews/HR): ಮಾಜಿ ಪ್ರಧಾನಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಡಾ.ಮನಮೋಹನ್ ಸಿಂಗ್ ಅವರು ಇಂದು 90 ನೇ ವರ್ಷಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿ ಟ್ವೀಟ್ ಮಾಡಿ, ಇಂದು 90 ನೇ ವರ್ಷಕ್ಕೆ ಕಾಲಿಡುತ್ತಿರುವ ಮನಮೋಹನ್ ಸಿಂಗ್ ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ರಾಹುಲ್ ಗಾಂಧಿ ಟ್ವೀಟ್ ಮಾಡಿ 'ಭಾರತದ ಅತ್ಯುತ್ತಮ ರಾಜನೀತಿಜ್ಞರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ನನಗೆ ಮತ್ತು ಇತರ ಕೋಟ್ಯಂತರ ಭಾರತೀಯರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ಸಂತೋಷಕ್ಕಾಗಿ ನಾನು ಪ್ರಾರ್ಥಿಸುತ್ತೇನೆ' ಎಂದರು.