ನವದೆಹಲಿ, ಅ 31 (DaijiworldNews/HR): ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಲಿಸಿರುವ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಬ್ರೆಜಿಲ್ನಲ್ಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸೆಲುವು ಸಾಧಿಸಿದ ಲುಲಾ ಡಾ ಸಿಲ್ವಾ ಅವರಿಗೆ ಅಭಿನಂದನೆಗಳು. ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಾಢವಾಗಿಸಲು ಮತ್ತು ವಿಸ್ತರಿಸಲು ಮತ್ತು ಜಾಗತಿಕ ವಿಷಯಗಳಲ್ಲಿ ನಮ್ಮ ಸಹಕಾರವನ್ನು ಹೆಚ್ಚಿಸಲು ನಾನು ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದರು.
ಇನ್ನು ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಲೂಲಾ ಅವರು ಅಧಿಕಾರದಲ್ಲಿರುವ ಜೈರ್ ಬೋಲ್ಸನಾರೊ ಅವರನ್ನು ಸೋಲಿಸುವ ಮೂಲಕ ಗೆದ್ದಿದ್ದಾರೆ.