ಅಮೃತಸರ, ನ 05 (DaijiworldNews/HR): ಶಿವಸೇನೆ ನಾಯಕ ಸುಧೀರ್ ಸೂರಿ ಅವರನ್ನು ಶುಕ್ರವಾರ ಗುಂಡಿಕ್ಕಿ ಹತ್ಯೆಗೈದ ಪ್ರಕರಣ ಸಂಬಂಧ ಕೆನಡಾ ಮೂಲದ ದರೋಡೆಕೋರ ಲಖ್ಬೀರ್ ಸಿಂಗ್ ಲಾಂಡಾ ಹತ್ಯೆಯ ಹೊಣೆಯನ್ನು ವಹಿಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸುಧೀರ್ ಸೂರಿ
ಫೇಸ್ ಬುಕ್ ನಲ್ಲಿ ಪೋಸ್ಟ್ನಲ್ಲಿ ಕೆನಡಾ ಮೂಲದ ದರೋಡೆಕೋರ ಲಖ್ಬೀರ್ ಸಿಂಗ್ ಲಾಂಡಾ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಹೆಚ್ಚಿನ ಬೆಳವಣಿಗೆಗಳ ಕುರಿತು ಪೊಲೀಸ್ ಅಧಿಕಾರಿಗಳು ಪ್ರತಿಕ್ರಿಯಿಸದಿದ್ದರೂ, ಸಾಮಾಜಿಕ ಮಾಧ್ಯಮ ಪೋಸ್ಟ್ ಅಸಲಿತನವನ್ನು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದೇವೆ ಮತ್ತು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 ರ ಅಡಿಯಲ್ಲಿ ಕೊಲೆ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಪಂಜಾಬ್ ಡಿಜಿಪಿ ತಿಳಿಸಿದ್ದಾರೆ.