ಬಳ್ಳಾರಿ, ಜ 11 (DaijiworldNews/HR): ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸುವಷ್ಟು ದೊಡ್ಡ ವ್ಯಕ್ತಿ ನಾನಲ್ಲ. ತವರು ಜಿಲ್ಲೆಯಲ್ಲಿ ಸ್ಪರ್ಧಿಸುವ ಕುರಿತು ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
![](https://daijiworld.ap-south-1.linodeobjects.com/Linode/img_tv247/hr-110123-ramalu.jpg)
ಈ ಕುರಿತು ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬುದು ಇನ್ನೂ ತೀರ್ಮಾನವಾಗಿಲ್ಲ. ನಾಲ್ಕು ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ, ಪಕ್ಷಕ್ಕೆ ಮತ್ತು ಮುಖ್ಯಮಂತ್ರಿಗಳಿಗೆ ವರದಿ ನೀಡುತ್ತೇನೆ. ವರದಿ ಆಧರಿಸಿ ಪಕ್ಷ ಸೂಚಿಸಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂದರು.
ಇನ್ನು ಸಿದ್ದರಾಮಯ್ಯ ಮಾಸ್ ಲೀಡರ್. ನಾನು ಅವರಷ್ಟು ದೊಡ್ಡ ಲೀಡರ್ ಅಲ್ಲ. ನನ್ನ ಸಾಮರ್ಥ್ಯದ ಮಟ್ಟಕ್ಕೆ ನಾನು ಯೋಚಿಸುತ್ತೇನೆ. ನನ್ನ ಇತಿಮಿತಿಯಲ್ಲಿ ಎಲ್ಲಿ ಸ್ಪರ್ಧಿಸಬೇಕೋ ಅಲ್ಲಿಯೇ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ.