ಬೆಂಗಳೂರು, ಫೆ 17 (DaijiworldNews/HR): ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಧರ್ಮಪತ್ನಿ ವಿಜಯಮ್ಮ(69) ಶುಕ್ರವಾರ ವಿಧಿವಶರಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ವಿಜಯಮ್ಮನವರು ಅನಾರೋಗ್ಯದಿಂದ ಬಳಲುತ್ತಿದ್ದರು ಅವರು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ, ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದು, ವಿಜಯಮ್ಮನವರ ಪಾರ್ಥಿವ ಶರೀರವನ್ನು ಕೋಲಾರ ಜಿಲ್ಲೆಯ ಶ್ರೀನಿವಾಸಪುರಕ್ಕೆ ಕೊಂಡೊಯ್ಯುವ ಸಾಧ್ಯತೆ ಎಂದು ವರದಿಯಾಗಿದೆ.