ಮುಲ್ಕಿ, ಏ 04(DaijiworldNews/AA): ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.
ಜಾತ್ರೆಯಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ವಾಹನಗಳನ್ನ ಪಾರ್ಕ್ ಮಾಡಲಾಗಿತ್ತು. ಹೀಗಾಗಿ ರಥ ಹೋಗಲು ಸ್ಥಳವಿಲ್ಲದಂತೆ ಆಗಿತ್ತು. ಈ ಕಾರಣದಿಂದ ರಥ ಹೋಗಲು ದಾರಿ ಮಾಡುವ ಉದ್ದೇಶದಿಂದ ಭಕ್ತರು ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್ ಗಳನ್ನು ಬದಿಗೆ ದೂಡಿ ಹಾಕಿದ್ದು, ಇದರಿಂದಾಗಿ ವಾಹನಗಳೂ ಜಖಂಗೊಂಡಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.